ರೈಲ್ವೆ ಇಲಾಖೆಯಲ್ಲಿ 14,298 ಸರ್ಕಾರಿ ಹುದ್ದೆಗಳ ನೇಮಕಾತಿ.! 10ನೇ ಮತ್ತು ITI ಪಾಸಾದವರು ಅರ್ಜಿ ಸಲ್ಲಿಸಿ.! ಇಲ್ಲಿದೆ ಪೂರ್ತಿ ವಿವರ.!

ರೈಲ್ವೆ ಇಲಾಖೆಯಲ್ಲಿ 14,298 ಸರ್ಕಾರಿ ಹುದ್ದೆಗಳ ನೇಮಕಾತಿ.! 10ನೇ ಮತ್ತು ITI ಪಾಸಾದವರು ಅರ್ಜಿ ಸಲ್ಲಿಸಿ.! ಇಲ್ಲಿದೆ ಪೂರ್ತಿ ವಿವರ.!

ಎಲ್ಲ ಸ್ನೇಹಿತರಿಗೂ ನಮಸ್ಕಾರ, ಈ ಒಂದು ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸ ಹೊರಟಿರುವ ವಿಷಯವೇನೆಂದರೆ ರೈಲ್ವೆ ಇಲಾಖೆ ನೇಮಕಾತಿ ಮಂಡಳಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. 9,144 ರೈಲ್ವೆ ಇಲಾಖೆ ಹುದ್ದೆಗಳನ್ನು 14,298 ಹುದ್ದೆಗಳಿಗೆ ಏರಿಕೆ ಮಾಡಲಾಗಿದೆ. ಈ ಒಂದು ಹುದ್ದೆಗಳಿಗೆ ಹೊಸ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸಬಹುದು ಎಂದು ಬಿಡುಗಡೆ ಮಾಡಿರುವ ಅಧಿಸೂಚನೆಯಲ್ಲಿ ರೈಲ್ವೆ ಇಲಾಖೆಯು ಹೇಳಿದೆ. ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿಯನ್ನು ಹೇಗೆ ಸಲ್ಲಿಸುವುದು ಮಾಹಿತಿಯು ಈ ಲೇಖನದ ಮೂಲಕ ನಾವು ನಿಮಗೆ ತಿಳಿಸಿದ್ದೇವೆ ಆದ ಕಾರಣದಿಂದ ತಾವೆಲ್ಲರೂ ಈ ಒಂದು ಲೇಖನವನ್ನು ಪೂರ್ತಿಯಾಗಿ ತಪ್ಪದೆ ಓದಿರಿ.

ಹುದ್ದೆಗಳ ವಿವರ: ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 9,144 ಹುದ್ದೆಗಳನ್ನು 14,298 ಹುದ್ದೆಗಳಿಗೆ ಟೆಕ್ನಿಷಿಯನ್ ಗ್ರೇಡ್ 1 ಸಿಗ್ನಲ್, ಟೆಕ್ನಿಷಿಯನ್ ಗ್ರೇಡ್ 3 ಗೆ ರೈಲ್ವೆ ಇಲಾಖೆಯು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಇದರ ಮೂಲಕ ಮತ್ತೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಯಸ್ಸಿನ ಮಿತಿ: ಈ ಮೂಲಕ ಈ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 18 ರಿಂದ 36 ವರ್ಷದ ಒಳಗಿನ ಪುರುಷ ಮತ್ತು ಮಹಿಳೆಯರು ಇಬ್ಬರೂ ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. SC, ST ಅಭ್ಯರ್ಥಿಗಳಿಗೆ 5 ವರ್ಷದವರೆಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಉಳಿದೆಲ್ಲ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಹತೆ ಏನು: ಈ ರೈಲ್ವೆ ಇಲಾಖೆ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಹತ್ತನೇ ತರಗತಿಯನ್ನು ಉತ್ತೀರ್ಣರಾಗಿರಬೇಕು ಮತ್ತು ITI ಐಟಿಐ ಅನ್ನು ಪಾಸಾಗಿರಬೇಕು. ಹಾಗೆ ಪದವಿ ಪಾಸ್ ಆಗಿರುವಂತಹ ಅಭ್ಯರ್ಥಿಗಳು ಕೂಡ ಕೆಲವು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ರೈಲ್ವೆ ಇಲಾಖೆಯ ಅವಕಾಶವನ್ನು ನೀಡಿದೆ.

ಅರ್ಜಿ ಶುಲ್ಕ: SC, ST ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳು, ಅಂಗವಿಕಲರು, ಮಾಜಿ ಸೇವಾ ಪುರುಷ ಹಾಗೂ ಇಬಿಸಿ ಅಭ್ಯರ್ಥಿಗಳು ರೂ 250 ಅರ್ಜಿ ಶುಲ್ಕವಾಗಿ ಪಾವತಿಸಬೇಕಾಗಿರುತ್ತದೆ. ಉಳಿದ ಎಲ್ಲಾ ಅಭ್ಯರ್ಥಿಗಳು ರೂ 500 ಅನ್ನು ಪಾವತಿ ಮಾಡಬೇಕಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ.!

  • ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಹಾಗೂ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಲಾಗುವುದು.
  • ಈ ಪರೀಕ್ಷೆಯು 100 ಅಂಕಗಳಿಗೆ ಉತ್ತರಿಸಲು 90 ನಿಮಿಷ ಕಾಲಾವಕಾಶವನ್ನು ನೀಡಲಾಗಿರುತ್ತದೆ.
  • 1/3 ನೆಗೆಟಿವ್ ಮಾರ್ಕಿಂಗ್ ಅನ್ನು ಕೂಡ ನೀಡಲಾಗಿರುತ್ತದೆ.
  • ಈ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಮೆರಿಟನ್ನು ನಿಲ್ಲಿಸಲಾಗುವುದು. ಆ ಮೆರಿಟ್ ಅಂಕಗಳ ಆಧಾರದ ಮೇಲೆ ದಾಖಲೆಗಳ ವಿವರವನ್ನು ಪರಿಶೀಲನೆ ಮಾಡಲಾಗುವುದು.
  • ನಂತರ ವೈದಿಕೀಯ ಪರೀಕ್ಷೆಯನ್ನು ನಡೆಸಿ ಫಿಟ್ನೆಸ್ ಪರೀಕ್ಷೆಗಳನ್ನು ನಡೆಸುವುದರ ಮೂಲಕ ಅರ್ಹ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ.!

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಇರುವಂತಹ ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಈ ಕೆಳಗಡೆ ನೀಡಲಾಗಿದೆ ಆ ವೆಬ್ಸೈಟ್ ಗೆ ಹೋಗುವುದರ ಮೂಲಕ ನೀವು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ.!

Leave a Comment