Railway Jobs Recruitment 2024: 10ನೇ ತರಗತಿ ಹಾಗೂ ITI ಪಾಸಾದವರಿಗೆ ಪರೀಕ್ಷೆ ಇಲ್ಲದೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗವಕಾಶ.!
Railway Jobs Recruitment 2024: ಎಲ್ಲ ಸ್ನೇಹಿತರಿಗೂ ನಮಸ್ಕಾರ, ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ವೆಸ್ಟ್ ಸೆಂಟ್ರಲ್ ರೈಲ್ವೆ ಇಲಾಖೆಯಲ್ಲಿ ಅಪ್ಪ್ರಂಟಿಸ್ ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳ ಬರ್ತಿಯನ್ನು ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಿದೆ. ಹಾಗಾಗಿ ಆಸಕ್ತಿಯನ್ನು ಹೊಂದಿರುವಂತಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ರೈಲ್ವೆ ಇಲಾಖೆಯ ನೇಮಕಾತಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕು, ವಯೋಮಿತಿ ಎಷ್ಟು, ಅರ್ಜಿ ಶುಲ್ಕ ಎಷ್ಟು ಮತ್ತು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎನ್ನುವ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿದ್ದೇವೆ ಆದ ಕಾರಣದಿಂದ ಪೂರ್ತಿಯಾಗಿ ಓದಿರಿ.
ನೇಮಕಾತಿ ಹುದ್ದೆ: ಅಪ್ರೆಂಟಿಸ್
ಉದ್ಯೋಗ ಸ್ಥಳ: ಭಾರತ ದೇಶದ ಎಲ್ಲ ರಾಜ್ಯಗಳಲ್ಲಿ ಕಾರ್ಯನಿರ್ವಹಿಸಬೇಕು.
ಒಟ್ಟು ಕಾಲಿ ಇರುವ ಹುದ್ದೆಗಳ ಸಂಖ್ಯೆ: 3,317
ಶೈಕ್ಷಣಿಕ ಅರ್ಹತೆ.!
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ವಿಶ್ವಸಂಸ್ಥೆಯಿಂದ 10ನೇ ತರಗತಿಯನ್ನು ಮತ್ತು ITI ಅನ್ನು ಮಾನ್ಯತೆ ಪಡೆದಿರಬೇಕಾಗಿರುತ್ತದೆ ಅಥವಾ ಕನಿಷ್ಠ 50 ಅಂಕಗಳೊಂದಿಗೆ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವಂತಹ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಯೋಮಿತಿ.!
ಕನಿಷ್ಠ 15 ವರ್ಷದಿಂದ ಗರಿಷ್ಠ 24 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯೋಮಿತಿ ಸಡಲಿಕೆ.!
- SCST ಅಭ್ಯರ್ಥಿಗಳಿಗೆ – 5 ವರ್ಷ
- OBC ಅಭ್ಯರ್ಥಿಗಳಿಗೆ – 3 ವರ್ಷ
- PWD ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆಯ ವಿಧಾನ.!
ವಿದ್ಯಾರ್ಹತೆಯಲ್ಲಿ ಪಡೆದಿರುವಂತಹ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಅನ್ನು ಮಾಡುತ್ತಾರೆ. ಆಮೇಲೆ ಸೆಲೆಕ್ಟ್ ಆದ ಅಭ್ಯರ್ಥಿಗಳ ದಾಖಲೆಗಳ ವಿವರವ ಪರಿಶೀಲನೆ ಮಾಡಿಕೊಂಡು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ.?
- SCST ಮಹಿಳಾ PWD ಅಭ್ಯರ್ಥಿಗಳಿಗೆ – 41 ರೂಪಾಯಿ.
- ಉಳಿದೆಲ್ಲ ಅಭ್ಯರ್ಥಿಗಳಿಗೆ – 141 ರೂಪಾಯಿ.
ಅರ್ಜಿ ಶುಲ್ಕ ಪಾವತಿಸುವ ವಿಧಾನ.?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ನಿಂದ ಆನ್ಲೈನ್ ಮುಖಾಂತರವೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿದೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು.?
- 5 ಆಗಸ್ಟ್ 2024 – ಅರ್ಜಿ ಸಲ್ಲಿಸುವ ಆರಂಭದ ದಿನಾಂಕವಾಗಿದೆ.
- 4 ಸಪ್ಟೆಂಬರ್ 2024 – ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಿರುವ ಲಿಂಕ್.!
https://nitplrrc.com/RRC_JBP_ACT2024/
ಸ್ನೇಹಿತರೆ, ಈ ಒಂದು ಲೇಖನವು ವೆಸ್ಟ್ ಸೆಂಟ್ರಲ್ ರೈಲ್ವೆ ಇಲಾಖೆಯಲ್ಲಿ ಅಪ್ಪ್ರಂಟಿಸ್ ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳ ಬರ್ತಿಯನ್ನು ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಹೇಗೆ ಸಲ್ಲಿಸುವುದು ಎನ್ನುವುದರ ಬಗ್ಗೆ ಈ ಒಂದು ಲೇಖನವೂ ನಿಮಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದೆ ಎಂದು ನಾವು ಭಾವಿಸುತ್ತೇವೆ ಧನ್ಯವಾದಗಳು.